Breaking News

ಸುಳ್ಯ : ಲಾಡ್ಜ್‌ ನಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರು ಯುವತಿಯರು ಸೇರಿ ಓರ್ವ ಪೊಲೀಸ್ ವಶಕ್ಕೆ

ಸುಳ್ಯ : ವೇಶ್ಯಾವಾಟಿಕೆ ಅಡ್ಡೆ ಮೇಲೆ ಸುಳ್ಯ ಪೊಲೀಸರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಜತೆಗೂಡಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಇಪ್ಪತ್ತೆರಡರಿಂದ ಇಪ್ಪತ್ತಮೂರು ವಯಸ್ಸಿನ ಇಬ್ಬರು ಯುವತಿಯರು ಹಾಗೂ ಓರ್ವ ರೂಂ ಬಾಯ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಇಬ್ಬರು ಏಜೆಂಟರು ತಲೆ ಮರೆಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಇಬ್ಬರು ಬಂಧಿತರು ಸುಳ್ಯ ಪೊಲೀಸರ ವಶದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಪುತ್ತೂರು, ಕಡಬ ಮೂಲದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆಗೆ ಯತ್ನ ನಡೆಸಲಾಗುತ್ತಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಪೊಲೀಸರೇ ನೀಡಬೇಕಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...