Breaking News

ಶಿವಮೊಗ್ಗ: ಪಾದ್ರಿ ಮನೆಗೆ ಬಜರಂಗದಳ ಕಾರ್ಯಕರ್ತರ ಮುತ್ತಿಗೆ..!

ಶಿವಮೊಗ್ಗ: ಆಮಿಷ ವಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ಪಾದ್ರಿ ಮನೆಗೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದಲ್ಲಿ ಘಟನೆ ನಡೆದಿದೆ.

ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಮುಂದಾಗಿ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ.

ಮನೆಯೊಂದರಲ್ಲಿ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿದ್ದಾರೆ. ಪಾದ್ರಿ ಮಣಿಕಂಠ ಎಂಬುವರು ಪ್ರಾರ್ಥನೆ ನಡೆಸುತ್ತಿದ್ದರು. ಹಿಂದೂಗಳಿಗೆ ಬೈಬಲ್ ನೀಡಿ ಪ್ರಾರ್ಥನೆ ಮಾಡಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಬಜರಂಗದಳ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿದ ಮಾಹಿತಿ ತಿಳಿದ ತುಂಗಾ ನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...