Breaking News

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 27 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ದೂರದ ಉಪನಗರವಾದ ವಿರಾರ್‌ನ ಸಾಯಿನಾಥ್ ನಗರ ಪ್ರದೇಶದ ನಿವಾಸಿಗಳಾದ ಇಬ್ಬರ ವಿರುದ್ಧ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಇಬ್ಬರು ವಾಕಿಂಗ್​ಗೆ ಹೋಗಿದ್ದಾಗ ಘಟನೆ ನಡೆದಿದೆ, ಈ ವಿಚಾರ ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾಗಿ ಅವರು ತಿಳಿಸಿದ್ದಾರೆ.

ಆರೋಪಿ ಹಾಗೂ ಆಕೆಯ ಪ್ರಿಯಕರನ ನಡುವೆ ವಾಗ್ವಾದ ನಡೆದು ಇಬ್ಬರು ಖಾಲಿ ಬಿಯರ್ ಬಾಟಲಿಯಿಂದ ಹೊಡೆದು, ಇಬ್ಬರೂ ಸೇರಿ ಯುವಕನನ್ನು ಮರಕ್ಕೆ ಕಟ್ಟಿಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಂತರ ಇಬ್ಬರೂ ಯುವತಿಯನ್ನು ಪ್ರತ್ಯೇಕ ಸ್ಥಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ಆರೋಪಿಗಳಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ, ಮನೆಗೆ ತಲುಪಿ ವಿಷಯ ತಿಳಿಸಿದ ಬಳಿಕ ಪೊಲೀಸರ ಸಹಾಯದಿಂದ ಆ ಯುವಕನನ್ನೂ ರಕ್ಷಿಸಲಾಯಿತು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...