Breaking News

ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ 5 ದಿನ ಲೋಕಾಯುಕ್ತ ಕಸ್ಟಡಿಗೆ , ಕೋರ್ಟ್ ಆದೇಶ

ಬೆಂಗಳೂರು: ಬಿಜೆಪಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ ರನ್ನು ಏಪ್ರಿಲ್ 1 ರವರೆಗೆ 5 ದಿನ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ( MLA Madal Virupakshappa ) ಪುತ್ರ ಪ್ರಶಾಂತ್ ಮಾಡಾಳ್ ರೆಡ್ ಹ್ಯಾಂಡ್ ಆಗಿಯೇ ಲೋಕಾಯುಕ್ತ ಪೊಲೀಸರಿಗೆ ( Karnataka Lokayukta ) ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಪುತ್ರ ಹಾಗೂ ಶಾಸಕರ ವಿರುದ್ಧ ದೂರು ದಾಖಲಾಗಿತ್ತು. ಬಂಧನದ ಭೀತಿಯಲ್ಲಿದ್ದಂತ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದರು. ನಿನ್ನೆ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ, ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದರು.

ಇಂದು ‘ಮಾಡಾಳ್ ವಿರೂಪಾಕ್ಷಪ್ಪ’ ನನ್ನು ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ನಂತರ ಲೋಕಾಯುಕ್ತ ಪೊಲೀಸರು 10 ದಿನ ವಶಕ್ಕೆ ಕೇಳಿದ್ದರು, ವಿಚಾರಣೆ ನಡೆಸಿದ ಕೋರ್ಟ್ 5 ದಿನ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.ಲೋಕಾಯುಕ್ತ ಕೇಸ್ ನಲ್ಲಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು. ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಂತ ಹೈಕೋರ್ಟ್ ನಡೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರಬರೆದು ಬೆಂಗಳೂರು ವಕೀಲರ ಸಂಘವು ಆಘಾತ ವ್ಯಕ್ತ ಪಡಿಸಿತ್ತು. ನಿನ್ನೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಅವಧಿ ಕೊನೆಗೊಂಡಿದ್ದ ಕಾರಣ ಮತ್ತೆ ಜಾಮೀನು ಮುಂದುವರೆಸಲು ಮನವಿ ಮಾಡಲಾಗಿತ್ತು. ಆದ್ರೇ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು. ಅವರು ಚೆನ್ನಗಿರಿಯಿಂದಲೇ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಅರಿತಂತ ಲೋಕಾಯುಕ್ತ ಪೊಲೀಸರು ಮಾರ್ಗ ಮಧ್ಯೆ ಅವರನ್ನು ಪ್ರಕರಣ ಸಂಬಂಧ ಬಂಧಿಸಿದ್ದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...