Breaking News

ಮಂಗಳೂರು: ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆಗೆ ಕಾರ್ಯಕರ್ತರ ಒತ್ತಯ; ಜಿಲ್ಲಾ ಕಾಂಗ್ರೆಸ್ ಕಛೇರಿ ಮುಂದೆ ಜಮಾಯಿಸಿದ ನಂದಕುಮಾರ್ ಅಭಿಮಾನಿಗಳು

ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಲು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದ ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿಯನ್ನು ಬದಲಾಯಿಸಬೇಕೆಂದು ಪಟ್ಟುಹಿಡಿದಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.

ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ‌ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ನ್ಯಾಯ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...