Breaking News

ಕಡಬ: ದೈವ ನರ್ತನ ವೇಳೆಯಲ್ಲಿ ಕುಸಿದು ಬಿದ್ದು ನರ್ತಕ ಸಾವು..!

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಸಾವನ್ನಪ್ಪಿದ ಘಟ ಇಂದು ಬೆಳಿಗ್ಗೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದ ದುರ್ದೈವಿ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗಿಲ್ಲ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...