Breaking News

ಕಡಬ : ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆಯೂ ಕೂಡ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ. ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ.

ಕಳೆದ ರಾತ್ರಿ ರೆನೀಶ್ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ ನ ಸ್ಟೇಟಸ್ ನಲ್ಲಿ ಬರೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...