Breaking News

ಸೌದಿ ಅರೇಬಿಯಾ: ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿ ನಿಧನ

ಸೌದಿ ಅರೇಬಿಯಾ: ಉಮ್ರಾಯಾತ್ರೆಗೆ ತೆರಳಿದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.

ಬಂಟ್ವಾಳ ವಗ್ಗ ನಿವಾಸಿ ಉಸ್ಮಾನ್(67) ಮೃತರು.ಉಸ್ಮಾನ್ ಅವರು ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆಗೆ ತೆರಳಿದ್ದರು. ಅಲ್ಲಿ ಅವರಿಗೆ ಹೃದಯಾಘಾತವಾಗಿತ್ತು.ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಮೆಕ್ಕಾದ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಗಂಭೀರ ಸ್ಥಿತಿಯಲ್ಲಿ ಕಿಂಗ್ ಫೈಸಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಸ್ಮಾನ್ ಅವರು ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಮೂಲಗಳ ಪ್ರಕಾರ ಅವರ ಅಂತ್ಯಕ್ರಿಯೆ ಕೂಡ ಅಲ್ಲಿಯೇ ನಡೆಯಲಿದೆ ಎನ್ನಲಾಗಿದೆ

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...