Breaking News

ಸಾರ್ವಜನಿಕ-ಖಾಸಗಿ ಆಸ್ತಿಯಲ್ಲಿನ ಬ್ಯಾನರ್‌, ಫ್ಲೆಕ್ಸ್‌ಗಳ ತೆರವು: ದ.ಕ. ಜಿಲ್ಲಾಧಿಕಾರಿ

ಮಂಗಳೂರು: ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿರುವಂತೆಯೇ ಜಾರಿಗೊಂಡಿರುವ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಗೋಡೆ ಬರಹ, ಪೋಸ್ಟರ್‌ಗಳು, ಬ್ಯಾನರ್‌ ಹಾಗೂ ಇತರ ಕಟೌಟ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿದ್ದ ಒಟ್ಟು 4308 ಹಾಗೂ ಖಾಸಗಿ ಸ್ಥಳದಲ್ಲಿದ್ದ 494 ಜಾಹೀರಾತುಗಳನ ನು ತೆರವುಗೊಳಿಸಲಾಗಿದೆ ಎಂದು ದ.ಕ.

ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ತಿಳಿಸಿದ್ದಾರೆ.

ಗುರುವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಸಾರ್ವಜನಿಕ ಸ್ಥಳದಲ್ಲಿದ್ದ 507 ಗೋಡೆಬರಹಗಳು, 1421 ಪೋಸ್ಟರ್‌ಗಳು, 1746 ಬ್ಯಾನರ್‌ಗಳು ಹಾಗೂ ಇತರ 634 ಜಾಹೀರಾತುಗಳನ್ನು ನೀತಿ ಸಂಹಿತೆ ಜಾರಿಯ 24 ಗಂಟೆಗಳಲ್ಲಿ ತೆರವುಗೊಳಿಸಲಾಗಿದೆ. ಇದೇ ವೇಳೆ ಖಾಸಗಿ ಆಸ್ತಿಯಲ್ಲಿದ್ದ 21 ಗೋಡೆ ಬರಹ, 272 ಪೋಸ್ಟರ್‌ಗಳು, 184 ಬ್ಯಾನರ್‌ಗಳು, ಇತರ 17 ಜಾಹೀರಾತುಗಳನ್ನು ತೆರವುಗೊಳಿಸುವ ಕಾರ್ಯವನ್ನು ಅಧಿಕಾರಿಗಳು ನಡೆಸಿದ್ದಾರೆ ಎಂದರು.

 

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...