Breaking News

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ, ವಾಹನ ಕಳವು

ಬೆಳ್ತಂಗಡಿ: ಪಡಂಗಡಿಯಲ್ಲಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ಹಣ ವರ್ಗಾವಣೆ ಮಾಡಿ ನಿಲ್ಲಿಸಿದ್ದ ವಾಹನವನ್ನು ಕದ್ದು ಪರಾರಿಯಾಗ ಘಟನೆ ಮಾ. 30ರಂದು ನಡೆದಿದೆ.

ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಹಣ ಎಗರಿಸಿದ ಆರೋಪಿತರು.

ಜುವಾಮ್‌ ಗೋವಿಯಸ್‌ ಅವರು ತನ್ನ ಮಗನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದ ಪರಿಚಯದ ರಿಯಾಜ್‌ ಮತ್ತು ಫೈಝಲ್‌ ಬಂದು ಕಟ್ಟಿಗೆಯಿಂದ ಹಲ್ಲೆ ನಡೆಸಿದರು. ಬಳಿಕ ಫೋನ್‌ನಲ್ಲಿದ್ದ ಗೂಗಲ್‌ ಪೇ ಪಿನ್‌ ನಂಬರ್‌ ಪಡೆದು 82,000 ರೂ.ಗಳನ್ನು ಆರೋಪಿಗಳ ಪತ್ನಿಯರ ಹೆಸರಿನ ಖಾತೆಗೆ ವರ್ಗಾಯಿಸಿ ಮೊಬೈಲ್‌ ಮತ್ತು ಅಂಗಳದಲ್ಲಿ ನಿಲ್ಲಿಸಿದ್ದ 2,82,000 ರೂ. ಮೌಲ್ಯದ ತ್ರಿಚಕ್ರ ವಾಹನ )ವನ್ನು ಕಳವು ಮಾಡಿರುವುದಾಗಿ ಜುವಾಮ್‌ ಗೋವಿಯಸ್‌ ದೂರು ನೀಡಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...