Breaking News

ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ..!

ದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ. ಬೆಂಗಳೂರು: ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ.
ಇತ್ತೀಚೆಗೆ ಕನಪುರದ ಸಾತನೂರು ಬಳಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ ಬಂಧನವಾಗಿದೆ. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಸಾತನೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣ ದಾಖಲಾಗುತ್ತಲೇ ಆರೋಪಿಗಳು ಕರ್ನಾಟಕದಿಂದ ಪರಾರಿ ಆಗಿದ್ದರು.

ಒಟ್ಟು ನಾಲ್ಕು ತಂಡಗಳಾಗಿ ಜನ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಸದ್ಯ ಆರೋಪಿಗಳನ್ನು ಅಲ್ಲಿಂದ ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಾರ್ಚ್ 31ರಂದು ಕನಕಪುರ ತಾಲ್ಲೂಕಿನ ಸಾತನೂರು ಪೊಲೀಸ್ ಠಾಣೆ ಬಳಿ ಆರೋಪಿಗಳು ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನವನ್ನು ತಡೆದಿದ್ದರು. ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...