Breaking News

ದ.ಕ. ಜಿಲ್ಲೆಗೆ 4 CRPF ತುಕಡಿ ಆಗಮನ

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 CRPF ಕಂಪನಿಗಳು ಆಗಮಿಸಿವೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಮ ತಿಳಿಸಿದ್ದಾರೆ.

ಈ 4 CRPF ಕಂಪನಿಗಳನ್ನು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮುಂದೆ ಇನ್ನು ಹೆಚ್ಚು ಕಂಪನಿಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಈ ಕಂಪನಿಗಳು ಚುನಾವಣೆ ಗೆ ಸಂಬಂಧಿಸಿದಂತೆ Area Domination, ಚೆಕ್ ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರತೆ ಕರ್ತವ್ಯ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸ್ ರಿಗೆ ಸಹಾಯಕ ಕರ್ತವ್ಯ ಹಾಗೂ ಇತರ ಚುನಾವಣೆ ಗೆ ಸಂಬಂದಿಸಿದ ಕರ್ತವ್ಯ ಗಳನ್ನು ನಿರ್ವಹಿಸಲಿವೆ ಎಂದು ಎಸ್ಪಿ ವಿವರಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...