Breaking News

ಕಟೀಲು : ದ್ವಿಚಕ್ರ ವಾಹನ ಅಪಘಾತ ಮಹಿಳೆ ಮೃತ್ಯು

ಕಟೀಲು: ಸಮೀಪದ ಕಲ್ಲಕುಮೇರು ಬಳಿ ದ್ವಿಚಕ್ರವಾಹನದಿಂದ ಬಿದ್ದು ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದೆ ಪತಿ ಒಂದೇ ವೇಗದಲ್ಲಿ ಬರುತ್ತಿದ್ದರು ಈ ಸಂದರ್ಭ ಹಿಂಬದಿ ಕುಳಿತಿದ್ದ ಪತ್ನಿ ಮಮತಾ ಶೆಟ್ಟಿ ದ್ವಿಚಕ್ರ ವಾಹನದಿಂದ ಬಿದ್ದು ಗಂಭೀರ ಗಾಯಗೊಂಡಿದ್ರು. ಕೂಡಲೇ ಅವರನ್ನು ಸಮೀಪದ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಮೃತ ಪಟ್ಟಿದ್ದಾರೆ. ಸ್ಥಳೀಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಮಾಜೀ ಅಧ್ಯಕ್ಷ ಸುಂದರ ನಿಡ್ಡೋಡಿ, ಅಭಿಲಾಷ್ ಶೆಟ್ಟಿ ಕಟೀಲು ಅಸ್ಪತ್ರೆಗೆ ಭೇಟಿ ನೀಡಿ ಸಹಕರಿಸಿದ್ದಾರೆ. ಮಮತಾ ಶೆಟ್ಟಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...