Breaking News

ಅಕ್ರಮ ‘ಮದ್ಯ’ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ : ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಡುಪಿ : ಜಿಲ್ಲೆಯಲ್ಲಿ ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳ್ನು ನಡೆಸಲಾಗುತ್ತಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಸನ್ನದುದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು.

ಅವರು ಇಂದು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಜಿಲ್ಲೆಯ ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ಹಾಗೂ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçಯಲ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ಮದ್ಯ ಮಾರಾಟಗಾರರು ಪ್ರತಿ ದಿನದ ದಾಸ್ತಾನು ಮತ್ತು ಮಾರಾಟದ ವಿವರಗಳ ದಾಖಲೆಗಳನ್ನು ನಿರ್ವಹಿಸುವುದರ ಜೊತೆಗೆ ಅಬಕಾರಿ ಇಲಾಖೆಗೆ ನಿಗಧಿತ ಮಾಹಿತಿಯನ್ನು ಒದಗಿಸಬೇಕು, ಇದರಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಲ್ಲಿ ಮತ್ತು ನಿಗಧಿತ ಸ್ಥಳವನ್ನು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಿದ್ದಲ್ಲಿ ಅಂತಹ ಸನ್ನದುದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿ ಎಲ್ಲಾ ಉದ್ದಿಮೆದಾರರು ತಮ್ಮ ಗೋಡೌನ್ ಗಳನ್ನು ಇತರರಿಗೆ ಅನ್ಯ ಉದ್ದೇಶಕ್ಕೆ ನೀಡದಂತೆ ಮತ್ತು ಗೋಡೌನ್ ಗಳಲ್ಲಿ ಯಾವುದೇ ಅಕ್ರಮ ದಾಸ್ತಾನುಗಳು ಶೇಖರವಾಗದಂತೆ ಎಚ್ಚರವಹಿಸಬೇಕು, ತಮ್ಮ ದೈನಂದಿನ ಸಗಟು ವ್ಯವಹಾರದ ಬಗ್ಗೆ ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರಿಶೀಲನೆಗೆ ನೀಡುವಂತೆ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçಯಲ್ ನ ಪದಾಧಿಕಾರಿಗಳಿಗೆ ಸೂಚಿಸಿದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...