Breaking News

ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ – ಉಡುಪಿಯ ಯುವಕ ಮೃತ್ಯು

ಉಡುಪಿ: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿ ಮಜೂರು ಕೊಂಬಗುಡ್ಡೆ ನಿವಾಸಿ ಮುಹಮ್ಮದ್  ರಿಯಾಝ್(27) ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.ಮಾರ್ಚ್ 25ರಂದು ಜುಬೈಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ರಿಯಾಝರನ್ನು ಜುಬೈಲ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ರವಿವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ತಂದೆತಾಯಿ, ಪತ್ನಿಯನ್ನು ಅಗಲಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...