Breaking News

BIGG NEWS :ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೆ ಭುಗಿಲೆದ್ದ ಆಕ್ರೋಶ : ಹಲವು ಮಾಜಿ, ಹಾಲಿ ಶಾಸಕರು ಬಂಡಾಯ!

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಒಟ್ಟು 224 ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಸಚಿವ ಎಸ್.ಅಂಗಾರ ಸೇರಿದಂತೆ ಒಟ್ಟು 9 ಮಂದಿ ಹಾಲಿ ಶಾಸಕರಿಗೆ ಕೊಕ್ ನೀಡಿದೆ.

 

189 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, 52 ಕ್ಷೇತ್ರಗಳಿಗೆ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದೆ. ಈ ಮೊದಲ ಪಟ್ಟಿಯಲ್ಲಿ 8 ಮಂದಿ ಮಹಿಳೆಯರಿದ್ದಾರೆ. 32 ಮಂದಿ ಹಿಂದುಳಿದ ವರ್ಗದವರಿಗೆ, 30 ಮಂದಿ ಪರಿಶಿಷ್ಟ ಜಾತಿ, 16 ಪರಿಶಿಷ್ಟ ಪಂಗಡದವರಿಗೆ ಟಿಕೆಟ್ ನೀಡಲಾಗಿದೆ.

ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಟಿಕೆಟ್ ವಂಚಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಆರ್. ಶಂಕರ್ ಅವರು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಅಥಣಿಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಣ್ಣೀರು ಹಾಕಿದ್ದಾರೆ. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಂಡಾಯದ ಸುಳಿವು ನೀಡಿದ್ದಾರೆ.

ರಾಮದುರ್ಗದಲ್ಲಿ ಶಾಸಕ ಮಹಾದೇವಪ್ಪ ಯಾದವಾಡ, ಕುಂದಗೋಳದಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧನಗೊಂಡಿರುವ ಮಾಜಿ ಶಾಸಕ ಎಸ್.ಐ ಚಿಕ್ಕನಗೌಡರು ಪಕ್ಷೇತರರಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...