Breaking News

ಬೆಂಗಳೂರು: ಕೆಟ್ಟು ನಿಂತ ಆಟೋದಲ್ಲಿ ಬರೊಬ್ಬರಿ ಒಂದು ಕೋಟಿ ರೂ.‌ಹಣ ಪತ್ತೆ

ಬೆಂಗಳೂರು: ಕೆಟ್ಟು ನಿಂತ ಆಟೋದಲ್ಲಿ ಬರೊಬ್ಬರಿ ಒಂದು ಕೋಟಿ ರೂ.‌ಹಣ ಪತ್ತೆಯಾದ ಘಟನೆ ಹಲಸೂರು ಗೇಟ್​ ಪೊಲೀಸ್​ ಠಾಣೆ ಬಳಿ ನಡೆದಿದೆ.

ಠಾಣೆ ಬಳಿಯ ಚೆಕ್ ಪೋಸ್ಟ್ ಪಕ್ಕ ಆಟೋ ಕೆಟ್ಟು ನಿಂತ ಸಂದರ್ಭದಲ್ಲಿ ಪೊಲೀಸರು ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣದ ಸಂಬಂಧ ಪ್ರವೀಣ್,ಸುರೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಘಟನೆ ಸಂಬಂಧ ಎಸ್​​ಜೆ ಪಾರ್ಕ್​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಘಟನೆ ಕುರಿತಂತೆ ಮಾಹಿತಿ ನೀಡಿರುವ ಚಿಕ್ಕಪೇಟೆ ನೋಡಲ್ ಅಧಿಕಾರಿ ಮನೋಜ್ ಮಿಶ್ರಾ, ಆರೋಪಿಗಳ ವಿಚಾರಣೆ ಪೊಲೀಸರು ನಡೆಸುತ್ತಿದ್ದು,ಹಣದ ಮೂಲದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಐಟಿ ಅಧಿಕಾರಿಗಳಿಗೆ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ವಿಚಾರಣೆ ಸಂದರ್ಭದಲ್ಲಿ ಎಂಟರ್ ಪ್ರೈಸಸ್ ವೊಂದಕ್ಕೆ ಸೇರಿದ ಹಣ ಎಂದು ಆರೋಪಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...