Breaking News

ಬಂಟ್ವಾಳ: ಸ್ಕೂಟರ್ ಗೆ KSRTC ಬಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ:ಕೆಎಸ್ಆರ್‌‌ಟಿಸಿ ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ(60) ಮೃತರು.

ಡೊಂಬಯ್ಯ ಅವರು ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ತೆರಳುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ಬಂದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಇವರು ಬಿಸಿರೋಡು ಕುಲಾಲ ಸಮುದಾಯ ಭವನದಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಅಪಘಾತದ ಬಳಿಕ ಬಸ್ ಚಾಲಕ ಬಸ್ ನಿಂದ ಇಳಿದು ಪರಾರಿಯಾಗಿದ್ದು, ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ‌ನೀಡಿದ್ದಾರೆ.

About gaitonlennon_rodrigues

Check Also

ಉಡುಪಿ: ಕಾಲೇಜು ಶೌಚಾಲಯ ಚಿತ್ರೀಕರಣ – ಸಂತ್ರಸ್ತೆಯ ಹೇಳಿಕೆ ಪಡೆದ ನ್ಯಾಯಾಲಯ

ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿದಿದ್ದು, ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿಯಿಂದ ನ್ಯಾಯಾಲಯವು …

Leave a Reply

Your email address will not be published. Required fields are marked *

Translate »
error: Content is protected !!
Share to...