Breaking News

ಮುಂಬೈ : ಪ್ರಪಾತಕ್ಕೆ ಬಿದ್ದ ಬಸ್ 12ಕ್ಕೂ ಅಧಿಕ ಮಂದಿ ಸಾವು..!

ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.

ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಮುಂಜಾನೆ 4.50ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 27 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬಾಜಿ ಪ್ರಭು ವಾಡಕ್ ಗ್ರೂಪ್‍ನ ಸದಸ್ಯರು ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‍ವಾಡ್‍ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮುಂಬೈನ ಗೋರೆಗಾಂವ್‍ಗೆ ಹಿಂತಿರುಗುತ್ತಿದ್ದರು. ಶನಿವಾರ ನಡುರಾತ್ರಿ 1 ಗಂಟೆ ಸುಮಾರಿಗೆ ಬಸ್ ಸ್ಥಳದಿಂದ ನಿರ್ಗಮಿಸಿತ್ತು. ಪ್ರಯಾಣಿಕರು ಮುಂಬೈನ ಸಿಯಾನ್ ಮತ್ತು ಗೋರೆಗಾಂವ್‍ನ ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‌ಗೆ ಸೇರಿದವರು ಎಂದು ರಾಯಗಢ ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...