Breaking News

ದುಬೈ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ; ಕೇರಳದ ನಿವಾಸಿಗಳು ಸೇರಿ 16 ಮಂದಿ ಮೃತ್ಯು

ದುಬೈ:ಅಪಾರ್ಟ್‌ ಮೆಂಟ್‌ ವೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಭಾರತೀಯರು ಸೇರಿದಂತೆ ಕನಿಷ್ಠ 16 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ದೇರಾ ಬುರ್ಜ್ ಮುರಾರ್ ಪ್ರದೇಶದಲ್ಲಿ ನಡೆದಿದೆ.
ಮೃತರಲ್ಲಿ ಇಬ್ಬರನ್ನು ಕೇರಳ ಮೂಲದ ರಿಜೇಶ್(38) ಮತ್ತು ಅವರ ಪತ್ನಿ ಜಿಶಿ(32) ಎಂದು ಗುರುತಿಸಲಾಗಿದೆ. ಇವರು ಮಲಪ್ಪುರಂ ನಿವಾಸಿಗಳಾಗಿದ್ದು ರಿಜೇಶ್ ಟ್ರಾವೆಲ್ ಕಂಪನಿಯ ಉದ್ಯೋಗಿಯಾಗಿದ್ದಾರೆ.ಮೃತ ಜಿಶಿ ಕ್ರೆಸೆಂಟ್ ಹೈಸ್ಕೂಲ್‌ನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ತಮಿಳುನಾಡು ಮೂಲದ ಅಬ್ದುಲ್ ಖಾದರ್ ಮತ್ತು ಸಲಿಯಾಕುಂಡ್ ಕೂಡ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಪಾಕಿಸ್ತಾನಿ ಸೋದರ ಸಂಬಂಧಿಗಳು ಮತ್ತು ನೈಜೀರಿಯಾದ ಮಹಿಳೆ ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲವಾದರೂ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ದುಬೈ ಸಿವಿಲ್ ಡಿಫೆನ್ಸ್ ಪ್ರಧಾನ ಕಛೇರಿಯ ತಂಡವು ಬೆಂಕಿಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿತು ಮತ್ತು ಕಟ್ಟಡದಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿತು.
ಪೋರ್ಟ್ ಸಯೀದ್ ಅಗ್ನಿಶಾಮಕ ಠಾಣೆ ಮತ್ತು ಹಮ್ರಿಯಾ ಅಗ್ನಿಶಾಮಕ ಠಾಣೆಯ ತಂಡಗಳನ್ನು ಸಹ ಕರೆದು ರಕ್ಷಣಾ ಕಾರ್ಯ ಮಾಡಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...