Breaking News

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಆಯ್ಕೆ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ಇದರ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿಯಾಗಿ ಪುಷ್ಪರಾಜ್.ಬಿ.ಎನ್., ಖಜಾಂಜಿಯಾಗಿ ವಿಜಯ ಕೋಟ್ಯಾನ್ ಪಡು, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿತೇಂದ್ರ ಕುಂದೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ 7 ಸದಸ್ಯ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಆರ್.ಸಿ.ಭಟ್, ಸತೀಶ್ ಇರಾ, ದಯಾನಂದ ಕುಕ್ಕಾಜೆ , ಹರೀಶ್ ಮೋಟುಕಾನ, ಆತ್ಮಭೂಷಣ್, ಬಿ.ಎಸ್.ಜೀವನ್, ಕೆ.ವಿಲ್ಪ್ರೆಡ್ ಡಿಸೋಜಾ ಆಯ್ಕೆಯಾಗಿದ್ದಾರೆ. ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಚುನಾವಣಾಧಿಕಾರಿಯಾಗಿ ಹಾಗೂ ನಿವೃತ್ತ ಉಪ ತಹಶೀಲ್ದಾರ್ ರಾಮಚಂದ್ರ ಸಹಾಯಕ ಚುನಾವಣಾಧಿಕಾರಿಯಾಗಿದ್ದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...