Breaking News

ಮಂಗಳೂರು ಉತ್ತರಕ್ಕೆ ಕಾಂಗ್ರೆಸ್’ನ ನಾಲ್ಕನೇ ಪಟ್ಟಿಯಲ್ಲೂ ಸಿಗದ ಉತ್ತರ

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ರವಿವಾರ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಏಳು ಜನರಿಗೆ ಟಿಕೆಟ್ ಘೋಷಿಸಲಾಗಿದೆ. ಆದರೆ, ಮಂಗಳೂರು ಉತ್ತರಕ್ಕೆ ಕಾಂಗ್ರೆಸ್ ಗೆ ಇನ್ನೂ ಉತ್ತರ ಸಿಕ್ಕಿಲ್ಲ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಹುಬ್ಬಳ್ಳಿ-ಧಾರಣವಾಡ ಪಶ್ಚಿಮ ಕ್ಷೇತ್ರದಿಂದ ದೀಪಕ್ ಚಿಂಚೋರೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಲಿಂಗಸೂರು ಕ್ಷೇತ್ರದಿಂದ ದುರ್ಗಪ್ಪ ಎಸ್ ಹೂಲಗೇರಿ, ಶಿಗ್ಗಾಂವಿಯಿಂದ ಮೊಹಮ್ಮದ್​ ಯೂಸುಫ್ ಸವಣೂರು, ಹರಿಹರದಿಂದ ನಂದಗಾವಿ ಶ್ರೀನಿವಾಸ್, ಚಿಕ್ಕಮಗಳೂರು ಕ್ಷೇತ್ರದಿಂದ ಎಚ್.ಡಿ.ತಮ್ಮಯ್ಯ ಹಾಗೂ ಶ್ರವಣಬೆಳಗೊಳದಿಂದ ಎಂ.ಎ.ಗೋಪಾಲಸ್ವಾಮಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.

ಒಟ್ಟು 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 216 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 8 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಂಡಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಪುಲಕೇಶಿ ನಗರ, ಸಿವಿ ರಾಮನ್ ನಗರ, ಮುಳಬಾಗಿಲು, ರಾಯಚೂರು ಸಿಟಿ,ಅರಕಲಗೂಡು, ಮಂಗಳೂರು ಉತ್ತರ, ಶಿಡ್ಲಘಟ್ಟ, ಕೆ ಆರ್ ಪುರಂ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಲಾಗಿಲ್ಲ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...