Breaking News

BREAKING NEWS : ಈ ಚುನಾವಣೆಯ ಬಳಿಕ `ಚುನಾವಣಾ ರಾಜಕೀಯದಿಂದ ನಿವೃತ್ತಿ’ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಲಿದ್ದು, ಇಂದು ವರುಣ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ.

ವರುಣದಲ್ಲಿ ರೋಡ್ ಶೋ ಬಳಿಕ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಜೆಡಿಎಸ್ ನನ್ನನ್ನು ಸೋಲಿಸಲು ಹಣದ ಹೊಳೆ ಹರಿಸಬಹುದು.

ಆದರೆ ಈ ಕ್ಷೇತ್ರದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನನ್ನನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿದ್ದಾರೆ ಎಂದರು.

ನನ್ನ ವಿರುದ್ಧ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿ-ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿದ್ದು, ಜೆಡಿಎಸ್ ನ ನಿಂದ ದಲಿತರಿಗೆ ಟಿಕೆಟ್ ನೀಡಲಾಗಿದೆ. ನನ್ನ ವಿರುದ್ಧ ಬಿಜೆಪಿಯವರು ಕುತುಂತ್ರ ಮಾಡಿದ್ದಾರೆ. ಆದರೆ ವರುಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಕೋಮುವಾದಿ ಪಕ್ಷ ರಾಜ್ಯವನ್ನು ಹಾಳು ಮಾಡಿದ್ದಾರೆ. ಆರ್ಥಿಕವಾಗಿ ದಿವಾಳಿಯಾಗಿದೆ. 40 ಪರ್ಸೆಂಟ್ ಕಮಿಷನ್ ತೆಗೆದುಕೊಂಡಿದ್ದಾರೆ. ಬಿಜೆಪಿಯನ್ನು ಸೋಲಿಸಬೇಕು. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಇದು ನನ್ನ ಕೊನೆಯ ಚುನಾವಣೆ ಈ ಚುನಾವಣೆ ಬಳಿಕ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...