Breaking News

BREAKING NEWS: ಏ.21ರ ನಾಳೆ ‘ದ್ವಿತೀಯ PUC ಪರೀಕ್ಷೆ’ ಫಲಿತಾಂಶ ಪ್ರಕಟ

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ  ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 21-04-2023ರಂದು ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...