Breaking News

ಪೂಂಚ್ ಭಯೋತ್ಪಾದಕ ದಾಳಿ- ಐವರು ಯೋಧರು ಹುತಾತ್ಮ

ಪೂಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ದಾಳಿ ನಡೆದ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಉಗ್ರರ ಪತ್ತೆಗೆ ಡ್ರೋಣ್’ಗಳು, ಸ್ನಿಫ್ಪರ್ ಡಾಗ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಗಡಿ ಜಿಲ್ಲೆಗಳಾದ ರಜೌರಿ ಹಾಗೂ ಪೂಂಚ್ ನಲ್ಲಿ ಹೈ ಅಲರ್ಟ್ ಘೋಷಮೆ ಮಾಡಲಾಗಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಕಣ್ಗಾವಲನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಘಟನೆ ಬಳಿಕ ಭಿಂಬರ್ ಗಲಿ-ಪೂಂಚ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಮೆಂಧರ್ ಮೂಲಕ ಪೂಂಚ್‌ಗೆ ಹೋಗಲು ಜನರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ನಡುವೆ ಘಟನಾ ಸ್ಥಳಕ್ಕೆ ಎನ್ಐಎ ತಂಡ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...