Breaking News

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರು ಪಾಲು!

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ನಡೆದ ದುರಂತವೊಂದರಲ್ಲಿ ನಾಲ್ವರು ಯುವಕರು ನದಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ನೀರುಪಾಲಾಗಿದ್ದರೆ ಓರ್ವ ಕಣ್ಮರೆಯಾಗಿದ್ದಾನೆ. ಉಡುಪಿ ಮತ್ತು ಶೃಂಗೇರಿ ಮೂಲದ ಯುವಕರಾದ ಇಬಾಜ್, ಫಜಾನ್, ಸೂಫಾನ್ ಮತ್ತು ಫರಾನ್ ನೀರುಪಾಲಾದವರು. ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದ ಇವರು, ಕುಕ್ಕುಡೆ ಕಿಣಿಯರ ಕುದ್ರು ಸಮೀಪ ದೋಣಿ ಮೂಲಕ ಮೀನು ಹಿಡಿಯಲು ತೆರಳಿದ್ದರು.ತಂಡದಲ್ಲಿ ಒಟ್ಟು ಏಳು ಯುವಕರಿದ್ದರು. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದ ಕಾರಣ ಇವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಸ್ಥಳೀಯರು, ಪೊಲೀಸರು ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...