Breaking News

ಸುಳ್ಯದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ

ಸುಳ್ಯದ ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ಸಂಭವಿಸಿದೆ.

ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.

ಎ.24 ರ ಬೆಳಿಗ್ಗೆ ಯತೀಶ್ ರವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿರುವುದು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯತೀಶ್ ರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವವುದಾಗಿ ತಿಳಿದು ಬಂದಿದೆ.ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದು, ಅವರಿಗೆ ಸುಮಾರು 30ವರ್ಷ ವಯಸ್ಸಾಗಿತ್ತು. ಮೃತರು ತಂದೆ ತಾಯಿ, ಸಹೋದರ, ಸಹೋದರಿ, ಬಂಧುಮಿತ್ರರನ್ನು ಅಗಲಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...