Breaking News

ನಾಳೆ ರಾಹುಲ್ ಗಾಂಧಿ ಕಡಲನಗರಿ ಮಂಗಳೂರಿಗೆ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಣದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿರುಸಿನ ಪ್ರಚಾರ ಕಾರ್ಯ ಕಡೆಯುತ್ತಿದೆ. ಕರಾವಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿಯ ರಾಷ್ಟ್ರೀಯ ನಾಯಕರ ದಂಡೇ ಹರಿದು ಬರುತ್ತಿದೆ. ನಾಳೆ (ಎಪ್ರಿಲ್ 27ರಂದು) ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಬೆಳಿಗ್ಗೆ ಉಡುಪಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯ ಮಾಡಲಿದ್ದಾರೆ. ಬಳಿಕ ಅವರು ಮಧ್ಯಾಹ್ನ 3:30ಕ್ಕೆ ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ನಗರದ ಹೊರವಲಯದ ಅಡ್ಯಾರ್ ನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ರಾಹುಲ್ ಗಾಂಧಿಯವರು ಬಹಿರಂಗ ಪ್ರಚಾರ ಸಭೆ ನಡೆಸಲಿದ್ದಾರೆ. ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಆಗಮಿಸಲಿದ್ದಾರೆ. ಲಕ್ಷದವರೆಗೆ ಜನರು ಸೇರುವ ನಿರೀಕ್ಷೆಯಿದೆ. ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ವ್ಯವಸ್ಥೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...