Breaking News

ಸ್ಕೂಟರ್ ಬೈಕ್ ಡಿಕ್ಕಿ- ಓರ್ವ ಸಾವು ,ಮತ್ತೋರ್ವ ಗಂಭೀರ

ಬ್ರಹ್ಮಾವರ: ಸ್ಕೂಟರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ಸಂಭವಿಸಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ಘಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ (68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಲಾಡಿ ಮಾರ್ಗವಾಗಿ ಸಾಯಿಬರಕಟ್ಟೆ ಕಡೆಯಿಂದ ಬ್ರಹ್ಮಾವರದ ಕಡೆಗೆ ಹೋಗುತ್ತಿದ್ದ ಬೈಕಿಗೆ ಬ್ರಹ್ಮಾವರ ಕಡೆಯಿಂದ ಸಾಯಿಬರಕಟ್ಟೆ ಕಡೆಗೆ ಬರುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಮತ್ತು ಸ್ಕೂಟರ್ ಸವಾರರಿಬ್ಬರೂ ವಾಹನಗಳ ಸಮೇತ ರಸ್ತೆಯ ಮೇಲೆ ಬಿದ್ದ ಗಾಯಗೊಂಡರು. ಇವರಿಬ್ಬರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಸಫ್ವಾನ್ ತಡರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...