Breaking News

ಗುಡ್‌ ನ್ಯೂಸ್‌: ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 171.50 ರೂ. ಇಳಿಕೆ

ಹೊಸದೆಹಲಿ:  ಪ್ರತಿ ತಿಂಗಳು ಒಂದನೇ ತಾರೀಕು ಸಿಲಿಂಡರ್‌ ಬೆಲೆಯಲ್ಲಿ ಏರಿಕೆ – ಇಳಿಕೆಯಾಗುತ್ತದೆ. ಅದೇ ರೀತಿ, ಮೇ 1, 2023 ರ ಸೋಮವಾರ ಸಹ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ವ್ಯತ್ಯಾಸವಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಮತ್ತೆ ಕಡಿತಗೊಳಿಸಿದೆ. ಆದರೆ, ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ವರದಿಗಳ ಪ್ರಕಾರ, ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು 171.50 ರೂ ಕಡಿತಗೊಳಿಸಲಾಗಿದೆ. ಇದರೊಂದಿಗೆ, ದೆಹಲಿಯಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಇಂದಿನಿಂದ 1856.50 ರೂ.ಗೆ ಮಾರಾಟವಾಗಲಿದೆ ಎಂದು ತಿಳಿದುಬಂದಿದೆ. ಇನ್ನು, ಈ ಬೆಲೆ ಇಳಿಕೆಯಿಂದ ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 1,808.50 ರೂ ಆಗಿದ್ದರೆ, ಕೋಲ್ಕತ್ತಾದಲ್ಲಿ 1,960.50 ರೂ. ಚೆನ್ನೈನಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ 2,021.50 ರೂ.ಗೆ ಮಾರಾಟವಾಗಲಿದೆ. ಈ ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿದೆ.

ಈ ಪರಿಷ್ಕರಣೆಯ ಮೊದಲು, ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಪ್ರಕಾರ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕ್ರಮವಾಗಿ 2,028 ರೂ., ಕೋಲ್ಕತ್ತಾದಲ್ಲಿ 2,132 ರೂ., ಮುಂಬೈನಲ್ಲಿ 1,980 ರೂ. ಮತ್ತು ಚೆನ್ನೈನಲ್ಲಿ . 2,192.50 ರೂ. ಗೆ ಮಾರಾಟವಾಗುತ್ತಿತ್ತು. ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್ 1 ರಂದು ಸಹ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 91.50 ರೂ. ಕಡಿತಗೊಳಿಸಿತ್ತು. ಈಗ ಮತ್ತೆ 171.50 ರೂ. ಇಳಿಕೆ ಮಾಡಲಾಗಿದೆ.

ಇನ್ನೊಂದೆಡೆ, ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಈ ವರ್ಷ ಮಾರ್ಚ್ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 350.50 ರೂ ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 50 ರೂ. ಏರಿಕೆ ಮಾಡಿತ್ತು. ಅಲ್ಲದೆ, ಜನವರಿ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್‌ಗೆ 25 ರೂ. ಏರಿಕೆ ಮಾಡಲಾಗಿತ್ತು.

About gaitonlennon_rodrigues

Check Also

BREAKING NEWS : ಹೊತ್ತಿ ಉರಿಯುತ್ತಿದೆ ಮಣಿಪುರ ; ಮ್ಯಾನ್ಮಾರ್ ಗಡಿ ಸಮೀಪದ ಮನೆ, ವಾಹನಗಳಿಗೆ ಬೆಂಕಿ

ಇಂಫಾಲ್ : ಮೇ 3ರಂದು ಮೀಟೆ-ಕುಕಿ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಪಾಳು ಬಿದ್ದಿದ್ದ ಮ್ಯಾನ್ಮಾರ್ ಗಡಿಗೆ ಸಮೀಪದಲ್ಲಿರುವ ಮಣಿಪುರದ ಮೊರೆ ಬಜಾರ್ನ …

Leave a Reply

Your email address will not be published. Required fields are marked *

Translate »
error: Content is protected !!
Share to...