Breaking News

ಬಿಜೆಪಿಗೆ ಬೆಂಬಲ ಘೋಷಿಸಿ ಕೊನೆ ಕ್ಷಣದಲ್ಲಿ ಕೈಕೊಟ್ಟ ಸುಮಲತಾ

ಮಂಡ್ಯ: ಈ ಚುನಾವಣೆಯಲ್ಲಿ ತಾವು ಬಿಜೆಪಿಗೆ ಬೆಂಬಲ ನೀಡೋದಾಗಿ ಘೋಷಿಸಿದ್ದ ಸಂಸದೆ ಸುಮಲತಾ ಈಗ ಅಚಾನಕ್ಆಗಿ ಉಲ್ಟಾ ಹೊಡೆದಿದ್ದಾರೆ. ಸದ್ಯ ಅವರು ಬಿಜೆಪಿಯ ಯಾವ ಅಬ್ಯರ್ಥಿಗೂ ಬೆಂಬಲ ನೀಡುತ್ತಿಲ್ಲ. ರೆಬೆಲ್ ಲೇಡಿ ಕೈ ಕೊಟ್ಟಿರುವುದು ಬಿಜೆಪಿ ನಾಯಕರಿಗೆ ಮುಜುಗರ ತಂದಿದೆ. ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲು ರೈತ ಸಂಘದ ಅಭ್ಯರ್ಥಿ ಅಭ್ಯರ್ಥಿ ದರ್ಶನ್ ಪುಟ್ಟಣಯ್ಯಗೆ ಸುಮಲತಾ ಬೆಂಬಲ ಘೋಷಣೆ ಮಾಡಿದ್ದಾರೆ. ಇತ್ತ ಸುಮಲತಾ ಅವರ ಬೆಂಬಲದ ನಿರೀಕ್ಷೆಯಲ್ಲಿದ್ದ ಬಿಜೆಪಿ ಅಭ್ಯರ್ಥಿಗೆ ಶಾಕ್ ಆಗಿದೆ. ಬಿಜೆಪಿಗೆ ತಿರುಮಂತ್ರ ಆದರೆ, ಇತ್ತೀಚೆಗೆ ಸುಮಲತಾ ಅವರು ಬಿಜೆಪಿಗೆ ನನ್ನ ಸಂಪೂರ್ಣ ಬೆಂಬಲ ಎಂದು ಘೋಷಿಸಿದ್ದರು. ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ ಎಂದು ಎಲ್ಲ ಕಡೆ ಹೇಳಿಕೊಂಡು ಬರುತ್ತಿದ್ದರು. ಆದರೀಗ ಬಿಜೆಪಿಗೆ ತಿರುಮಂತ್ರ ಹಾಕಿದ್ದಾರೆ. ಬಿಜೆಪಿ ಅಭ್ಯರ್ಥಿ ಕಣದಲ್ಲಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ನೀಡಿ ಎಂದು ಹೇಳುತ್ತಿದ್ದಾರೆ. ಕಾರ್ಯಕರ್ತರ ಆಕ್ರೋಶ ಸುಮಲತಾರ ಈ ನಡೆಯಿಂದ ಮೇಲುಕೋಟೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸುಮಲತಾಗೆ ನಾವು ಬೆಂಬಲ ಕೊಟ್ಟಿರಲಿಲ್ವ ಎಂದು ಕಾರ್ಯಕರ್ತರು ಪ್ರಶ್ನೆ ಮಾಡುತ್ತಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...