Breaking News

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅನಾರೋಗ್ಯದಿಂದ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಬುಧವಾರ (ಮೇ 10) ಮಧ್ಯರಾತ್ರಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿ.ಟಿ ರವಿ ಅವರಿಗೆ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡಿತ್ತು. ಕಳೆದ 15 ದಿನಗಳಿಂದಲೂ ಆಸ್ಪತ್ರೆ ಸೇರಿದ್ದ ಅವರು, ಲಿಂಗಾಯತ ಸಮಾವೇಶಕ್ಕೂ ಗೈರಾಗಿ, ವೀಡಿಯೋ ಮೂಲಕ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಚಿಕಿತ್ಸೆಗಾಗಿ ಮತ್ತೆ ಆಸ್ಪತ್ರೆ ಸೇರಿದ್ದಾರೆ.

About gaitonlennon_rodrigues

Check Also

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ..!

ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’  ಅಭಿಯಾನದ ಅಂಗವಾಗಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು …

Leave a Reply

Your email address will not be published. Required fields are marked *

Translate »
error: Content is protected !!
Share to...