Breaking News

100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ, ಚುನಾವಣಾ ಆಯೋಗ ಅಧಿಕೃತ ಮಾಹಿತಿ

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

 

ಸದ್ಯ ರಾಜ್ಯ ಚುನಾವಣಾ ಆಯೋಗ ನೀಡಿರುವ ಪ್ರಾಥಮಿಕ ಮಾಹಿತಿಗಳ ಪ್ರಕಾರ 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 68 ರಲ್ಲಿ ಬಿಜೆಪಿ, 24 ಕಡೆ ಜೆಡಿಎಸ್‌ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 1 ಸ್ವತಂತ್ರ 3 ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ 1 ಸರ್ವೋದಯ ಕರ್ನಾಟಕ ಪಕ್ಷ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...