Breaking News

ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಶೋಕ್ ಕುಮಾರ್ ರೈ ಸಾಧ್ಯತೆ..!

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಭೇರಿ ಬಾರಿಸಿರುವ ಅಶೋಕ್ ಕುಮಾರ್ ರೈ ಅವರು ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುಟಿ ಖಾದರ್ ಹಾಗೂ ಅಶೋಕ್ ರೆ ಮಾತ್ರ ಕಾಂಗ್ರೆಸ್ ನಿಂದ ವಿಧಾನಸಭೆ ಪ್ರವೇಶಿಸಿದ್ದು ಯುಟಿ ಖಾದರ್ ಅವರಿಗೆ ಉನ್ನತ ಸ್ಥಾನಮಾನಗಳು ಲಭಿಸಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದರಿಂದ ಮತ್ತು ಮುಂದಿನ ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ಮಾಡುವ ನಿಟ್ಟಿನಲ್ಲಿ ಅಶೋಕ್ ಕುಮಾರ್ ರೈ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ನಿಶ್ಚಲವಾಗಿದೆ.

ಈ ಬಗ್ಗೆ ಮೇ ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...