Breaking News

ಹೈಕಮಾಂಡ್ ಅಂಗಳಕ್ಕೆ `ಸಿಎಂ’ ಆಯ್ಕೆ ವಿಚಾರ : ಇಂದು ಮಧ್ಯಾಹ್ನವೇ ದೆಹಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಯಾಣ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿರುವ ಬಿಜೆಪಿಯಲ್ಲಿ ಇದೀಗ ಸಿಎಂ ಆಯ್ಕೆ ಕುರಿತು ಕಸರತ್ತು ಶುರುವಾಗಿದ್ದು, ಇಂದು ಮಧ್ಯಾಹ್ನವೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ಜೊತೆಗೆ ಚರ್ಚಿಸಲು ದೆಹಲಿಗೆ ತೆರಳಲಿದ್ದಾರೆ.

 

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕುರಿತಂತೆ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿದ್ದು, ಸಿಎಂ ಆಯ್ಕೆ ಕುರಿತು ಇಂದು ಎಐಸಿಸಿ ಅಧ್ಯಕ್ಷ ಹೈಕಮಾಂಡ್ ಜೊತೆಗೆ ಚರ್ಚಿಸಲು ದೆಹಲಿಗೆ ತೆರಳಲಿದ್ದಾರೆ.

ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಶಾಸಕರ ಜೊತೆಗೆ ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಬಳಿಕ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆಭೇಟಿ ನೀಡಿ ಸಿಎಂ ಆಗಲು ನನಗೆ ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಿಎಂ ಆಯ್ಕೆ ಬಗ್ಗೆ ಚರ್ಚೆ ನಡೆಸಿ ವಾಪಸ್ ರಾಜಕ್ಕೆ ಬಂದು ಮತ್ತೊಂದು ಸುತ್ತಿನ ಸಭೆ ನಡೆಸಿ ಸಿಎಂ ಆಯ್ಕೆ ಮಾಡಲಿದ್ದಾರೆ ಎನ್ನಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...