Breaking News

ಈ ವರ್ಷವೂ `ಶಾಲಾ ಪಠ್ಯಪುಸ್ತಕ’ ಪರಿಷ್ಕರಣೆ?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಇದೀಗ ಸರ್ಕಾರ ರಚನೆಗೆ ಕೌಂಟ್ ಡೌನ್ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತೊಮ್ಮೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯಾದ್ಯಂತ ಸಾಕಷ್ಟು ಪರ-ವಿರೋಧಗಳೂ ವ್ಯಕ್ತವಾಗಿದ್ದವು. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮತ್ತೊಮ್ಮೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿ.ಸಿ.ನಾಗೇಶ್ ಶಿಕ್ಷಣ ಸಚಿವರಾಗಿದ್ದ ಬಿಜೆಪಿ ಸರ್ಕಾರದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿತ್ತು. ಹೊಸ ಪಠ್ಯಪುಸ್ತಗಳಲ್ಲಿ ಧಾರ್ಮಿಕ ಚಳುವಳಿ ಮಾಡಿದ, ಬಸವಣ್ಣ, ನಾರಾಯಣ ಗುರು, ವಿವೇಕಾನಂದ, ಪೆರಿಯರ್ ಸಾವಿತ್ರಿ ಬಾಯಿ ಪುಲೆ, ಭಕ್ತಿ ಮತ್ತು ಸೂಫಿ ಪಂತ ತೆಗೆದು ಹಾಕಲಾಗಿತ್ತು. ಹೀಗಾಗಿ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಭಾರೀ ಪ್ರತಿಭಟನೆ ನಡೆಸಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮತ್ತೊಮ್ಮೆ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ಶೇ. 90 ರಷ್ಟು ಪಠ್ಯಪುಸ್ತಕಗಳು ಮುದ್ರಣ

ಮೇ. 29 ರಿಂದ ಪ್ರಸಕ್ತ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಲಿವೆ. ಹೀಗಾಗಿ ಪಠ್ಯಪುಸ್ತಕ ಮುದ್ರಣ ಮತ್ತು ಹಂಚಿಕೆ ಮಾಡುವ ಕರ್ನಾಟಕ ಪಠ್ಯಪುಸ್ತಕಗಳ ಸಂಘವು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಶೇ. 86 ರಷ್ಟು ಪುಸ್ತಕಗಳು ಸರಬರಾಜಾಗಿದ್ದು,

ಪ್ರಸಕ್ತ ಸಾಲಿನಲ್ಲಿ ಮಕ್ಕಳಿಗೆ ಅಂದಾಜು 6.39 ಲಕ್ಷ ಪಠ್ಯಪುಸ್ತಕಗಳ ಅವಶ್ಯಕತೆ ಇದ್ದು, ಈಗಾಗಲೇ 5.91 ಲಕ್ಷ ಪಠ್ಯಪುಸ್ತಕಗಳನ್ನು ಮುದ್ರಣ ಮಾಡಲಾಗಿದೆ. ಈ ಪೈಕಿ ಬಿಇಒಗಳ ಹಂತದಲ್ಲಿ 5.53 ಲಕ್ಷ ಪಠ್ಯಪುಸ್ತಕಗಳು ಸರಬರಾಜುಗೊಂಡಿವೆ. ಉಳಿದ ಶೇ.7.52 ರಷ್ಟು ಮುದ್ರಣ ಹಂತದಲ್ಲಿದ್ದು, ಇವು ಕೂಡ ಶೀಘ್ರದಲ್ಲೇ ಬಿಇಒ ಕಚೇರಿಗೆ ತಲುಪಲಿವೆ.

About gaitonlennon_rodrigues

Check Also

ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ ಹಂಚುತ್ತಿದ್ದ ಸೈಬರ್ ಸೆಂಟರ್ ಮಾಲೀಕ ಅರೆಸ್ಟ್..!

ಮೈಸೂರು: ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು …

Leave a Reply

Your email address will not be published. Required fields are marked *

Translate »
error: Content is protected !!
Share to...