Breaking News

ಪುತ್ತೂರು: ಬ್ಯಾನರ್‌ ಹಾಕಿ ಅವಮಾನಿಸಿದ್ದ ಕಿಡಿಗೇಡಿಗಳು- ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸರಕಾರಿ ಬಸ್ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರ ವಿರುದ್ಧ ಆಕ್ಷೇರ್ಹಪಾ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಬಾರಿಯ ವಿಧಾನ ಸಭೆಯ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಸೋಲಾಗುವುದಕ್ಕೆ ಇವರಿಬ್ಬರೇ ಕಾರಣ. ಇಬ್ಬರಿಗೂ ಭಾವಪೂರ್ಣ ಶ್ರದ್ಧಾಂಜಲಿ ಎನ್ನುವ ತಲೆಬರಹದಡಿ ಬ್ಯಾನರ್ ನ್ನು ಹಾಕಲಾಗಿತ್ತು. ಜೊತೆಗೆ ಬ್ಯಾನರ್ ಅದಕ್ಕೆ ಚಪ್ಪಲಿ ಹಾರವನ್ನೂ ಹಾಕಿ ಅವಮಾನ ಮಾಡಲಾಗಿತ್ತು. ಈ ಕುರಿತು ಪುತ್ತೂರು ಬಿಜೆಪಿ ಘಟಕದಿಂದ ದೂರು ನೀಡಲಾಗಿತ್ತು. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ಆರೋಪಿಗಳ ವಿಚಾರಣೆ ನಡಿತಾ ಇದೆ. ಬ್ಯಾನರ್ ಪ್ರಿಂಟ್ , ಬ್ಯಾನರ್ ಅಳವಡಿಕೆ ಹಾಗು ಅದಕ್ಕೆ ಸಹಕರಿಸಿದವರ ಮಾಹಿತಿಯನ್ನೂ ಕಲೆ ಹಾಕಲಾಗುತ್ತಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...