Breaking News

ಜ್ಞಾನವಾಪಿ ಮಸೀದಿ ಸರ್ವೆ ಅರ್ಜಿಗೆ ಕೋರ್ಟ್‌ ಸಮ್ಮತಿ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇರುವ ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಇರುವ ಜ್ಞಾನವಾಪಿ ಮಸೀದಿಯನ್ನು ಸರ್ವೆ ನಡೆಸಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಯನ್ನು ಜಿಲ್ಲಾ ಕೋರ್ಟ್‌ ಮಂಗಳವಾರ ಆದೇಶ ನೀಡಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ)ದಿಂದ ಸರ್ವೆ ನಡೆಸುವ ಬಗ್ಗೆ ವಕೀಲ ವಿಷ್ಣುಶಂಕರ ಜೈನ್‌ ಅವರು ಕೋರಿಕೆ ಸಲ್ಲಿಸಿದ್ದರು.

ಅದನ್ನು ಪರಿಶೀಲಿಸಿದ ನ್ಯಾಯಾಧೀಶ ಎ.ಕೆ.ವಿಶ್ವೇಶ್‌ ಕೋರಿಕೆಗೆ ಸಮ್ಮತಿ ಸೂಚಿಸಿದ್ದಾರೆ.

ಜತೆಗೆ ಮಸೀದಿ ಆಡಳಿತ ಮಂಡಳಿಗೆ ನೋಟಿಸ್‌ ನೀಡಿ, ಮೇ 19ರ ಒಳಗಾಗಿ ಉತ್ತರ ನೀಡುವಂತೆ ಆದೇಶ ನೀಡಿದ್ದಾರೆ. 22ರಂದು ಮುಂದಿನ ವಿಚಾರಣೆ ನಡೆಯಲಿದೆ.

ಕಳೆದ ಶುಕ್ರವಾರ ಅಲಹಾಬಾದ್‌ ಹೈಕೋರ್ಟ್‌ ಶಿವಲಿಂಗದ ಆಯಸ್ಸು ಅಳೆಯಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು ಎಂದು ಆದೇಶ ನೀಡಿತ್ತು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...