Breaking News

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ; ಬಿಜೆಪಿ ಕಾರ್ಯಕರ್ತರಿಗೆ ಠಾಣೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ. ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಿದ್ದು ಪೊಲೀಸರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ಕೂಡಿಹಾಕಿ ಆರೋಪಿಗಳಿಗೆ ತೀವ್ರವಾಗಿ ಥಳಿಸಲಾಗಿದೆ. ನಳಿನ್ ಕುಮಾರ್ ಆಪ್ತರು ಮತ್ತು ಪುತ್ತೂರಿನ ಬಿಜೆಪಿ ಪುಢಾರಿಗಳ ಒತ್ತಡಕ್ಕೊಳಗಾಗಿ ಪೊಲೀಸರು ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ.

ಪೊಲೀಸರ ಕಿರುಕುಳದಿಂದ ಕಾರ್ಯಕರ್ತರು ಎದ್ದು ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಏಳು ಮಂದಿ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಪಕ್ಷದ ಸೋಲಿನ ಬಗ್ಗೆ ಆಕ್ರೋಶಗೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ‌ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದರು. ಪೊಲೀಸರು ತೀವ್ರ ರೀತಿಯ ಕಿರುಕುಳ, ಚಿತ್ರಹಿಂಸೆ ಕೊಟ್ಟಿದ್ದಾರೆ. ಪೊಲೀಸರ ಕಿರುಕುಳ ವಿಷಯ ತಿಳಿದು ಅರುಣ್ ಪುತ್ತಲ ಕಾರ್ಯಕರ್ತರನ್ನು ಅವರ ಕೈಯಿಂದ ಬಿಡಿಸಿ ತಂದಿದ್ದಾರೆ. ‌

ತಮ್ಮ ಪಕ್ಷದ ಕಾರ್ಯಕರ್ತರಿಗೇ ಈ ರೀತಿ ಪೊಲೀಸರ ಮೂಲಕ ಚಿತ್ರಹಿಂಸೆ ಕೊಡಿಸಿದ್ದು ಪುತ್ತೂರಿನಲ್ಲಿ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪುತ್ತೂರಿನ ಬಿಜೆಪಿ ಪುಢಾರಿಗಳ ವಿರುದ್ಧ ಕಾರ್ಯಕರ್ತರ ಒಳಗಿನಿಂದಲೇ ಆಕ್ರೋಶದ ಕಟ್ಟೆಯೊಡೆದಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...