Breaking News

ಭರವಸೆ ನೀಡಿದ ಐದು ಗ್ಯಾರಂಟಿ ಯೋಜನೆ ಜಾರಿ – ಖರ್ಗೆ

ನವದೆಹಲಿ:ಸಿದ್ದರಾಮಯ್ಯ ಸಿಎಂ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲೇ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್‌ ಮಾಡಿದ್ದು 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ ಎಂದಿದ್ದಾರೆ.ʻಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆʼ ಎಂದಿದ್ದಾರೆ. ಆ ಮೂಲಕ ಸಿದ್ದು, ಡಿಕೆಶಿ ಮತ್ತು ಖರ್ಗೆ ಏಕಕಾಲಕ್ಕೆ ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಇದೆ ಎನ್ನುವ ಸಂದೇಶ ರವಾನಿಸಿದ್ದಾರೆ.

ಇನ್ನು ಎಐಸಿಸಿ ಅಧ್ಯಕ್ಷ ಖರ್ಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ ಮಾಡಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

About gaitonlennon_rodrigues

Check Also

ಮಹಿಳೆಯರ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ – ಓರ್ವ ಆರೋಪಿಯ ಬಂಧನ

ಇಂಫಾಲ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಓರ್ವ …

Leave a Reply

Your email address will not be published. Required fields are marked *

Translate »
error: Content is protected !!
Share to...