Breaking News

‘ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ’ – ಡಿಕೆಶಿ

ಬೆಂಗಳೂರು : ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದ್ದು, ದೆಹಲಿಗೆ ಡಿ.ಕೆ.ಶಿವಕುಮಾರ್‌ ತೆರಳುವ ಮುನ್ನವೇ ಪದಗ್ರಹಣ ನಡೆಯುವ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿ, ನಾಳೆಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ನೀವೆಲ್ಲರೂ ಆಗಮಿಸಬೇಕು ನಾನು ಇಂದು ಈ ಒಂದು ಮಾಧ್ಯಮಗಳ ಮೂಲಕವೇ ಆಹ್ವಾನಿಸುತ್ತಿದ್ದೇನೆ.ಕರ್ನಾಟಕ ರಾಜ್ಯದ ಎಲ್ಲ ಮುಖಂಡರಾದ ಜನತಾದಳ ಇರಬಹುದು, ಬಿಜೆಪಿ ಇರಬಹುದು ಎಲ್ಲರು ನಾಳೆ ನಡೆಯುವ ಕಾರ್ಯಕ್ರಮಕ್ಕೆ ಅನ್ಯತಾ ಭಾವದಿಂದ ಬರಬೇಕು ನೀವು ಕೂಡ ಸರ್ಕಾರದ ಒಂದು ಭಾಗ ಎಂದುಕೊಂಡು ಆಗಮಿಸಬೇಕು. ಕಾಂಗ್ರೆಸ್‌ ಪಕ್ಷ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆ ತರುತ್ತೇವೆ. ಮನೆ ಒಡತಿಗೆ ಹಣ ನೀಡುವ ಭರವಸೆಯನ್ನು ಪ್ರಿಯಾಂಕಾ ಗಾಂಧಿ ನೀಡಿದ್ದಾರೆ ಎಂದು ಬೆಂಗಳೂರಿನಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

About gaitonlennon_rodrigues

Check Also

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ..!

ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’  ಅಭಿಯಾನದ ಅಂಗವಾಗಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು …

Leave a Reply

Your email address will not be published. Required fields are marked *

Translate »
error: Content is protected !!
Share to...