Breaking News

ಮಂಗಳೂರು: ಮಂಗಳಮುಖಿಯರಿಂದ ಯುವಕನ ಮೇಲೆ ಹಲ್ಲೆ

ಮಂಗಳೂರು: ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈಒವರ್ ಕೆಳಗೆ ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ಸಂಜೆ ವೇಳೆ ನಡೆದಿದೆ.

ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ವೇಳೆ ಬೀಡು ಬಿಟ್ಟಿರುವ ಇಬ್ಬರು ಮಂಗಳಮುಖಿಯರು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆ.ಘಟನೆ ನಡೆದ ತಕ್ಷಣ ಸ್ಥಳೀಯ ನಾಗರೀಕರು ಜಮಾಯಿಸಿದ್ದು, ಇನ್ನು ಮುಂದೆ ಇಲ್ಲಿ ಅನೈತಿಕ ಚಟುವಟಿಕೆಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಮತ್ತಿಬ್ಬರು ಮಂಗಳಮುಖಿಯರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಾಹಿತಿ ಪಡೆದ ಉರ್ವಾ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಘಟನೆ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

About gaitonlennon_rodrigues

Check Also

ಉಡುಪಿ: ಕಾಲೇಜು ಶೌಚಾಲಯ ಚಿತ್ರೀಕರಣ – ಸಂತ್ರಸ್ತೆಯ ಹೇಳಿಕೆ ಪಡೆದ ನ್ಯಾಯಾಲಯ

ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿದಿದ್ದು, ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿಯಿಂದ ನ್ಯಾಯಾಲಯವು …

Leave a Reply

Your email address will not be published. Required fields are marked *

Translate »
error: Content is protected !!
Share to...