Breaking News

ಅಮೆರಿಕದ ಎಲ್ ಸಾಲ್ವಡಾರ್ ಕ್ರೀಡಾಂಗಣದಲ್ಲಿ ಕಾಲ್ತುಳಿತ, 9 ಮಂದಿ ಸಾವು

ಸ್ಯಾನ್ ಸಾಲ್ವಡಾರ್ (ಎಲ್ ಸಾಲ್ವಡಾರ್): ಸೆಂಟ್ರಲ್ ಅಮೆರಿಕದ ಎಲ್ ಸಾಲ್ವಡಾರ್‌ನಲ್ಲಿ ಪಂದ್ಯ ನೋಡಲು ಕ್ರೀಡಾಂಗಣಕ್ಕೆ ನುಗ್ಗಲು ಅಭಿಮಾನಿಗಳು ಯತ್ನಿಸಿದ್ದು, ನೂಕುನುಗ್ಗಲು ಉಂಟಾಗಿದೆ. ಈ ವೇಳೆ, ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

 

ಕಸ್ಕಾಟ್ಲಾನ್ ಸ್ಟೇಡಿಯಂನಲ್ಲಿ ಅಲಿಯಾಂಜಾ ಮತ್ತು ಎಫ್‌ಎಎಸ್ ನಡುವಿನ ಪಂದ್ಯವನ್ನು ವೀಕ್ಷಿಸಲು ಪ್ರವೇಶಿಸಲು ಪ್ರಯತ್ನಿಸಿದ ಅಭಿಮಾನಿಗಳ ಕಾಲ್ತುಳಿತ ಉಂಟಾಗಿದೆ ಎಂದು ತಿಳಿದುಬಂದಿದೆ.

ಘಟನೆ ನಂತ್ರ ತುರ್ತು ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ವರ್ಗಾಯಿಸಲಾಗುತ್ತಿದೆ ಎಂದು ಸಾಲ್ವಡಾರ್‌ನ ಆರೋಗ್ಯ ಸಚಿವ ಫ್ರಾನ್ಸಿಸ್ಕೊ ಅಲಾಬಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಎಲ್ ಸಾಲ್ವಡಾರ್‌ನ ನ್ಯಾಷನಲ್ ಸಿವಿಲ್ ಪೋಲೀಸ್ ಒದಗಿಸಿದ ವಿಡಿಯೋದಲ್ಲಿ ಕ್ರೀಡಾಂಗಣದ ಹೊರಗೆ ಅನೇಕ ಆಂಬ್ಯುಲೆನ್ಸ್‌ಗಳನ್ನು ನಿಲ್ಲಿಸಿರುವುದನ್ನು ಮತ್ತು ವೈದ್ಯರು ಘಟನಾ ಸ್ಥಳಕ್ಕೆ ಧಾವಿಸುತ್ತಿರುವುದನ್ನು ತೋರಿಸಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...