Breaking News

ಅತಿ ಶೀಘ್ರದಲ್ಲೇ ‘ಇಂದಿರಾ ಕ್ಯಾಂಟೀನ್’ನಲ್ಲಿ ರುಚಿಕರವಾದ ಊಟ-ತಿಂಡಿ ಜನರಿಗೆ ಲಭ್ಯ – ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬಿಜೆಪಿ ನೇತೃತ್ವದ ಸರ್ಕಾರದ ವೇಳೆ ಇಂದಿರಾ ಕ್ಯಾಂಟೀನ್ ( Indira Canteen ) ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿತ್ತು. ಬಡಜನರಿಗೆ ಊಟ, ತಿಂಡಿ ಸಿಗದಂತೆ ಆಗಿತ್ತು. ಅಂತಹ ಇಂದಿರಾ ಕ್ಯಾಂಟೀನ್ ಗಳಿಗೆ ಪುನಶ್ಚೇತನ ನೀಡಲಾಗುತ್ತದೆ.

ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ನಲ್ಲಿ ರುಚಿಕರವಾದ ಊಟ, ತಿಂಡಿ ಜನರಿಗೆ ಲಭ್ಯವಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ ಸದುದ್ದೇಶದಿಂದ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದಾಗಿ ಕೆಲವು ಮುಚ್ಚಿವೆ, ಹಲವು ಮುಚ್ಚುವ ಸ್ಥಿತಿಯಲ್ಲಿವೆ ಎಂದು ಕಿಡಿಕಾರಿದ್ದಾರೆ.

‘ಗರೀಬಿ ಹಟಾವೋ’ ಘೋಷಣೆಯ ಮೂಲಕ ಬಡತನ ನಿರ್ಮೂಲನೆಯ ಕಾರ್ಯವನ್ನು ಕಾಳಜಿಯಿಂದ ಮಾಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹೆಸರಿನ ಇಂದಿರಾ ಕ್ಯಾಂಟಿನ್ ಗಳನ್ನು ಮುಚ್ಚಲು ನಾವು ಅವಕಾಶ ನೀಡುವುದಿಲ್ಲ. ಅಗತ್ಯ ಸಂಪನ್ಮೂಲ ಒದಗಿಸಿ ಅವುಗಳನ್ನು ಪುನಶ್ಚೇತನಗೊಳಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಗಳು ಸ್ವಸ್ಥ ಮತ್ತು ರುಚಿಕರವಾದ ಊಟ-ತಿಂಡಿಗಳೊಂದಿಗೆ ಜನರ ಸೇವೆ ಶುರುಮಾಡಲಿವೆ. ಹಸಿದವರ ಪಾಲಿಗೆ ಅನ್ನವೇ ದೇವರು ಎಂಬುದಾಗಿ ಹೇಳಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...