Breaking News

ಸುಳ್ಯ:ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಸುಳ್ಯ : ಸ್ಕೂಟಿ‌ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿಯ ಅರಂತೋಡು ಮರ್ಕಂಜ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟ ಸ್ಕೂಟಿ ಸವಾರನನ್ನು ಸುಳ್ಯದ ಕುಕ್ಕುಜಡ್ಕ ಮೂಲದ ನವೀನ್(30) ಎಂದು ಹೇಳಲಾಗಿದೆ. ಕಾರು ಮಂಡ್ಯ ಮೂಲದ್ದಾಗಿದ್ದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು.
ಈ ವೇಳೆ ಅರಂತೋಡು ಮರ್ಕಂಜ ಕ್ರಾಸ್ ಬಳಿ ಕಲ್ಲುಗುಂಡಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.ಘಟನೆ ಪರಿಣಾಮ ಸ್ಕೂಟಿ ನಜ್ಜುಗುಜ್ಜಾಗಿದ್ದು ಸವಾರ ಸ್ಥಳದಲ್ಲಿ ಸಾವನಪ್ಪಿದ್ದಾನೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...