Breaking News

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ `ಸುನೀಲ್ ಕನುಗೋಲು’ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದರು.

ಇದೀಗ ಸಿದ್ದರಾಮಯ್ಯ ಅವರು, ಕನುಗೋಲು ಅವರನ್ನೇ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಮುಂದಾಗಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಕೈಗೊಂಡಿದ್ದರು. ಇದು ಬಿಜೆಪಿಗೆ ಭಾರೀ ಆಘಾತ ನೀಡಿತ್ತು, 40% ಸರ್ಕಾರ ಅನ್ನೋ ಕ್ಯಾಂಪೇನ್‌ ಅನ್ನು ಕಾಂಗ್ರೆಸ್‌ ಮಾಡಿತ್ತು. ಪೇ ಸಿಎಂ ಅಭಿಯಾನ, ಭಾರತ್ ಜೋಡೋ ಯಾತ್ರೆ ಯೋಜಿಸಿದ ಕೀರ್ತಿ ಸುನಿಲ್ ಕನುಗೋಲುಗೆ ಸಲ್ಲುತ್ತದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...