Breaking News

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ‘ನಾಲ್ವರು IAS ಅಧಿಕಾರಿ’ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ.

ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಆರ್ಟಿಕಲ್ಚರ್ ಮತ್ತು ಸಿರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ರಾಜೇಂದ್ರ ಕುಮಾರ್ ಕಠಾರಿಯ ಅವರನ್ನು ವರ್ಗಾವಣೆ ಮಾಡಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.

 

2000 ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರನ್ನು ಎಂಸ್‌ಎಂಇ ಮತ್ತು ಮೈನ್ಸ್ ಕಾರ್ಯದರ್ಶಿಯ ಹುದ್ದೆಯಿಂದ ವರ್ಗಾವಣೆ ಮಾಡಿ, ಕೆಪಿಟಿಸಿಎಲ್ ಎಂ.ಡಿಯಾಗಿ ನೇಮಕ ಮಾಡಲಾಗಿದೆ.

ಕೆಪಿಟಿಸಿಎಲ್ ಎಂಡಿಯಾಗಿದ್ದಂತ ಡಾ.ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಯುವಜನ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

ಕೃಷಿ ಇಲಾಖೆಯ ಕಮೀಷನರ್ ಆಗಿದ್ದಂತ ಶರತ್ ಬಿ ಅವರನ್ನು ವರ್ಗಾವಣೆ ಮಾಡಿ, ಕರ್ನಾಟಕ ಅರ್ಬನ್ ವಾಟರ್ ಸಪ್ಲೈ ಮತ್ತು ಡ್ರೈನೇಜ್ ಬೋರ್ಡ್ ಎಂ.ಡಿಯಾಗಿ ನೇಮಕ ಮಾಡಲಾಗಿದೆ. ಇಲ್ಲಿದ್ದಂತ ಮೋಹನ್ ರಾಜ್ ಕೆ.ಪಿ ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...