Breaking News

ಮಹಿಳೆಯ ಬರ್ಬರ ಕೊಲೆ- ಕೈ ಕಾಲು, ರುಂಡ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಮೃತ ದೇಹ ಪತ್ತೆ..!

ಬೆಂಗಳೂರು: ಮಹಿಳೆಯೋರ್ವರ ಮೃತ ದೇಹ ಕೈ ಕಾಲು ಮತ್ತು ರುಂಡವನ್ನು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಹೊರವಲಯದ ಬನ್ನೇರುಘಟ್ಟದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಬನ್ನೇರುಘಟ್ಟದ ಜನತಾ ಕಾಲೋನಿ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ.

ಇವರು ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಆರು ವರ್ಷಗಳ ಹಿಂದೆ ಪತಿ ತೀರಿಕೊಂಡ ನಂತರ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾದ ನಂತರ ಇವರು ಒಂಟಿ ಜೀವನ ನಡೆಸುತ್ತಿದ್ದರು. ನಾಲ್ಕು ದಿನಗಳ ಹಿಂದೆ ಗೀತಾ ಅವರಿಗೆ ಮಗಳು ಕರೆ ಮಾಡಿದಾಗ ಕರೆ ಸಿಗುತ್ತಿಲ್ಲ ಎಂದು ತಿಳಿದು ಬಂದಿತ್ತು. ಹೀಗಾಗಿ ಬುಧವಾರ ರಾತ್ರಿ ತನ್ನ ತಾಯಿಯನ್ನು ನೋಡಲೆಂದು ಮಗಳು ಮನೆಗೆ ಬಂದಿದ್ದರು. ಆದರೆ ಮನೆಗೆ ಬೀಗ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮುಂಜಾನೆ ವೇಳೆಗೆ ಗೀತಾ ಅವರ ಮನೆಯ ಮುಂದಿನ ಕೌಂಪೌಂಡ್ ಬಳಿ ದುರ್ವಾಸನೆ ಕಂಡು ಬರುತ್ತಿದೆ ಎಂದು ನೆರೆಹೊರೆಯವರು ಹೇಳಿದ್ದರು. ಬಳಿಕ ಹೋಗಿ ನೊಡಿದಾಗ ರುಂಡ ಹಾಗೂ ಕೈ ಕಾಲು ಇಲ್ಲದ ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಕಂಡಾಗ ನೆರೆಹೊರೆಯವರು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಅವರು ಪೋಲಿಸರಿಗೆ ಮಾಹಿತಿ ನೀಡಿದ್ದರು. ಬಳಿಕ ಕುಟುಂಬಸ್ಥರು ಬಂದು ನೋಡಿದಾಗ ಇದು ಗೀತಾಳ ಶವವೆಂದು ಪತ್ತೆ ಹಚ್ಚಿದ್ದಾರೆ. ಹುಡುಕಾಟ ನಡೆಸಿದರೂ ತಲೆ ಅಥವಾ ಕೈಕಾಲುಗಳು ಪತ್ತೆಯಾಗಿಲ್ಲ. ಮೃತ ದೇಹ ಬಹುತೇಕ ಕೊಳೆತು ಹೋಗಿತ್ತು. ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. 3-4 ದಿನಗಳ ಹಿಂದೆ ಮನೆ ಖಾಲಿ ಮಾಡಿದ ಪಕ್ಕದ ಮನೆಯಲ್ಲಿ ವಾಸವಿದ್ದ ಮೂವರು ಯುವಕರ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೀಗ ಪ್ರಾಥಮಿಕ ತನಿಖೆಯಲ್ಲಿ ಮೇ 28 ಅಥವಾ 29 ರಂದು ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಈ ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ಮಾಡುತ್ತಿದ್ದೇವೆ ಮತ್ತು ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರದ ಮೂವರು ಯುವಕರ ಪಾತ್ರದ ಬಗ್ಗೆ ಬಲವಾಗಿ ಶಂಕಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ. ಕೊಲೆ ಪ್ರಕರಣವನ್ನು ಬನ್ನೇರುಘಟ್ಟದ ಪೊಲೀಸರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎನ್ನಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...