Breaking News

ಉಳ್ಳಾಲ:ಯುವತಿಯ ಮಾನಭಂಗಕ್ಕೆ ಯತ್ನ: ಆರೋಪಿಯ ಬಂಧನ

ಉಳ್ಳಾಲ:ಕೆಲಸದಿಂದ ವಾಪಸ್ಸಾಗುತ್ತಿದ್ದ ಯುವತಿ ಮೇಲೆ ಕಾರ್ಮಿಕನೋರ್ವ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ತಲಪಾಡಿಯಲ್ಲಿ ನಡೆದಿದೆ.

ಉತ್ತರಪ್ರದೇಶ ಮೂಲದ ರಾಮು ಕೆ. ಎಂಬಾತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳೂರಿಗೆ ಕೆಲಸಕ್ಕೆ ತೆರಳಿ ಮನೆಗೆ ವಾಪಸ್ಸಾಗುವ ಸಂದರ್ಭ ದಾರಿಮಧ್ಯೆ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿ ಆರೋಪಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಯುವತಿ ಈ ವೇಳೆ ಬೊಬ್ಬೆ ಹಾಕಿದ್ದು ಸ್ಥಳೀಯರು ಓಡಿಬಂದು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...