Breaking News

ಮಂಗಳೂರು: ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ

ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಮುಲೈ ಮುಹಿಲನ್ ಇದಕ್ಕೂ ಮೊದಲಿ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿದ್ದು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.

1986 ರಲ್ಲಿ ಜನಿಸಿದ ಅವರು 2013 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿಕುಮಾರ್ ಅವರಿಗೆ ಇನ್ನು ಹುದ್ದೆ ತೋರಿಸಿಲ್ಲ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...